ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ ಬಳಿ ಸರಣಿ ಅಪಘಾತ: ಓರ್ವ ಸಾವು, ನಾಲ್ವರು ಗಂಭೀರ

ಎರಡು ಕಾರು, ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಳೇಹಳ್ಳಿ ಗೇಟ್ ಸಮೀಪ ಬುಧವಾರ ಸಂಭವಿಸಿದೆ.

ಚಿತ್ರದುರ್ಗ: ಎರಡು ಕಾರು, ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಳೇಹಳ್ಳಿ ಗೇಟ್ ಸಮೀಪ ಬುಧವಾರ ಸಂಭವಿಸಿದೆ.

ಮೃತರನ್ನು ಶಂಭು (60) ಎಂದು ಗುರುತಿಸಲಾಗಿದೆ. ತರಿಕೆರೆ ತಾಲ್ಲೂಕಿನ ಲಕ್ಕವಳ್ಳಿಯಿಂದ ಹೊಳಲ್ಕೆರೆ ತಾಲ್ಲೂಕಿನ ಕೊಂಡಾಪುರ ಗ್ರಾಮಕ್ಕೆ ಕನ್ಯೆ ನೋಡಲು ಎರಡು ಕಾರುಗಳಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಕಡೆಯಿಂದ ವೇಗವಾಗಿ ಬಂದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಎರಡೂ ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಚಿತ್ರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್: ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'; Video ವೈರಲ್!