ರಾಜ್ಯ

ಕನಿಷ್ಠ ಒಂದು ವರ್ಷದವರೆಗೆ ವಿದ್ಯುತ್ ದರ ಏರಿಕೆ ನಿರ್ಧಾರ ಕೈಬಿಡಿ: ಸರ್ಕಾರಕ್ಕೆ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯ

Sumana Upadhyaya

ಬೆಂಗಳೂರು: ಕೊರೋನಾ ಸೋಂಕು, ನೆರೆ ಹಾವಳಿ, ಆರ್ಥಿಕ ಕುಸಿತದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡುವುದು ಸರಿಯಲ್ಲ. ಇನ್ನು ಕನಿಷ್ಠ ಒಂದು ವರ್ಷದವರೆಗೆ ವಿದ್ಯುತ್ ದರ ಏರಿಕೆ ಪ್ರಸ್ತಾಪವನ್ನು ಮುಂದೂಡಿ ಎಂದು ಸರ್ಕಾರವನ್ನು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಪ್ರತಿ ಯೂನಿಟ್ ಗೆ ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗುತ್ತದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

SCROLL FOR NEXT