ರಾಜ್ಯ

ಸರ್ಕಾರಿ, ಅನುದಾನಿತ ಕಾಲೇಜು ಉಪನ್ಯಾಸಕರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ

Manjula VN

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ನವೆಂಬರ್ 4-11ರವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. 

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 12ರಿಂದಲೂ ವರ್ಕ್ ಫ್ರಮ್ ಹೋಮ್'ಗೆ ಅವಕಾಶ ನೀಡುವಂತೆ ಉಪನ್ಯಾಸಕರು ಆಗ್ರಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ.4-11ರವರೆಗೂ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. 

ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ಈ ಸಂದರ್ಭದಲ್ಲಿ ಡಿಜಿಟಲ್ ಲರ್ನಿಂಗ್, ಆನ್'ಲೈನ್ ಮತ್ತು ಆಫ್'ಲೈನ್ ಬೋಧನೆ ಮತ್ತು ಬೋಧನೆಗೆ ಸಂಬಂಧಪಟ್ಟಂತರ ಇತರೆ ವಿಧಾನಗಳಿಗೆ ಸಿದ್ಧತೆ ನಡೆಸಿಕೊಳ್ಳಬಹುದಾಗಿದೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 

ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಟಿ ಎಂ ಮಂಜುನಾಥ್ ಮಾತನಾಡಿ, ಕೊರೋನಾ ಸಾಂಕ್ರಾಮಿಕ ನಡುವಲ್ಲೂ ಕಾಲೇಜುಗಳಿಗೆ ಬರುತ್ತಿರುವ ಉಪನ್ಯಾಸಕರಿಗೆ ಇದೊಂದು ಸಣ್ಣ ವಿರಾಮ ನೀಡಿದಂತಾಗಿದೆ ಎಂದು ಹೇಳಿದ್ದಾರೆ. 

ಈ ನಡುವೆ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶೀತಲ್ ಹಿರೇಮಠ್ ಅವರು, ತುರ್ತು ಕೆಲಸ ಮತ್ತು ಪರೀಕ್ಷೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಶಾಲಾ ಪ್ರಾಂಶುಪಾಲರು ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಿದ್ದೇ ಆದರೆ, ಶಿಕ್ಷಕರು ಕಡ್ಡಾಯವಾಗಿ ಶಾಲೆಗೆ ತೆರಳಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. 

SCROLL FOR NEXT