ರಾಜ್ಯ

ಕೊರೋನಾ ಸೋಂಕು ನಿಯಂತ್ರಿಸಲು ದಿಟ್ಟ ಕ್ರಮ: ರಾಜ್ಯಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ

Manjula VN

ಬೆಂಗಳೂರು: ಕೊರೋನಾ ನಿಯಂತ್ರಣ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡಿರುವ ದಿಟ್ಟಕ್ರಮಗಳು ಸಮಾಧಾನಕರವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಹೇಳಿದ್ದಾರೆ. ಅಲ್ಲದೆ, ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ. 

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಹಾಗೂ ವ್ಯಾಕ್ಸಿನ್ ವಿತರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲಾ ಜಿಲಾಲಾಡಳಿತಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಲಾಕ್ಡೌನ್ ಸಡಿಲಿಕೆ ಬಳಿಕ ಹೆಚ್ಚಳವಾಗಿದ್ದ ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದು ಸಮಾಧಾನಕರ ಸಂಗತಿ ಎಂದು ಹೇಳಿದ್ದಾರೆ. 

ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳ ಮೂಲಕ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮುಂಬರುವ ಚಳಿಗಾಲ ಮತ್ತು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಕಾರ್ಯತಂತ್ರ ರೂಪಿಸಬೇಕು. ಅಂತರಾಷ್ಟ್ರೀಯ ಮತ್ತು ಅಂತರಾಜ್ಯ ಪ್ರಯಾಣಿಕರ ಮೇಲೆ ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ. 

ಸಚಿವ ಸುಧಾಕರ್ ಅವರು ರಾಜ್ಯ ಸರ್ಕಾರ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹಂತ ಹಂತವಾಗಿ ಹೊರಡಿಸಿದ ಎಲ್ಲಾ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳನ್ನು ಕೇಂದ್ರ ಸಚಿವರಿಗೆ ಸವಿವರವಾಗಿ ವಿವರಿಸಿದರು. 

SCROLL FOR NEXT