ರಾಜ್ಯ

ಅರ್ನಬ್ ಗೋಸ್ವಾಮಿ ಬಂಧನ: ಸಚಿವ ಸಿಟಿ ರವಿ, ಅಶ್ವತ್ಥ್ ನಾರಾಯಣ್ ತೀವ್ರ ಖಂಡನೆ

Manjula VN

ಬೆಂಗಳೂರು: ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಕೇಂದ್ರದಲ್ಲಷ್ಟ ಅಲ್ಲದೆ, ರಾಜ್ಯದಲ್ಲೂ ತೀವ್ರ ಖಂಡನೆಗಳು ವ್ಯಕ್ತವಾಗುತ್ತಿದೆ. 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಯಿಂದ ಉಪಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ವರೆಗೂ ಹಾಗೂ ರಾಜ್ಯ ಹಲವು ರಾಜಕೀಯ ನಾಯಕರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. 

ಅರ್ನಬ್ ಗೋಸ್ವಾಮಿ ಬಂಧನವಾಗುತ್ತಿದ್ದಂತೆಯೇ ಟೀಕೆ ಹಾಗೂ ಆಕ್ರೋಶಗಳು ವ್ಯಕ್ತವಾಗುವುದನ್ನು ಕಂಡ ರಾಜ್ಯ ಕಾಂಗ್ರೆಸ್ ನಾಯಕರು ಸ್ಥಳೀಯ ಕನ್ನಡ ವಾಹಿನಿ ಪವರ್ ಟಿವಿ ಮೇಲೆ ನಡೆದಿದ್ದ ದಾಳಿ ಕುರಿತು ಪ್ರಶ್ನೆ ಮಾಡಲು ಆರಂಭಿಸಿದ್ದರು. ಅಲ್ಲದೆ ಬಿಜೆಪಿಯನ್ನು ಕಪಟ ಬಣ್ಣಿಸಿದ್ದಾರೆ. 

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಸಿಟಿ ರವಿಯವರು, ಅಭಿವ್ಯಕ್ತಿ ಸ್ವಾತಂತ್ರ್ಯ ವಾರಿಯರ್ಸ್ ಈಗೆಲ್ಲಿದ್ದಾರೆ? ಘಟನೆ ಕುರಿತು ಇಂದು ಮೌನವಾಗಿರುವ ಮೂಲಕ ಇಂತಹವರು ಮಹಾರಾಷ್ಟ್ರ ಸರ್ಕಾರದ ಫ್ಯಾಸಿಸಂಗೆ ಬೆಂಬಲ ನೀಡಿದಂತಾಗುತ್ತದೆ. ಮಹಾರಾಷ್ಟ್ರ ತನ್ನ ಬಲವನ್ನು, ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ತುರ್ತುಪರಿಸ್ಥಿತಿಯನ್ನು ನೆನಪಿಸುತ್ತಿದೆ ಎಂದು ಹೇಳಿದ್ದಾರೆ. 

ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಮಾತನಾಡಿ, ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಹೇಳಿದ್ದಾರೆ. 

ಈ ನಡುವೆ ಹೇಳಿಕೆ ನೀಡಿರುವ ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡು ರಾವ್ ಅರ್ನಬ್ ಗೋಸ್ವಾಮಿಯವರು ಬಂಧನ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ, ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ 'ಪವರ್ ಟಿವಿ'ಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ..? ಎಂದು ಪ್ರಶ್ನಿಸಿದ್ದಾರೆ. 

SCROLL FOR NEXT