ಪಂಚಮ ಸಾಲಿ ಪೀಠದ ಸ್ವಾಮೀಜಿ ಜಯಮೃತ್ಯಂಜಯ 
ರಾಜ್ಯ

ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ

ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ಬೆಂಗಳೂರು: ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

ವಿನಯ್ ಕುಲಕರ್ಣಿ ಅವರನ್ನು ಬಂಧಿಸುವ ಮುನ್ನ ಕನಿಷ್ಠ ನೋಟಿಸ್ ನೀಡಬಹುದಿತ್ತು. ಚುನಾವಣೆ ಸಂದರ್ಭದಲ್ಲಿ ಕೇವಲ ನಮ್ಮ ಜನಾಂಗವನ್ನು ಬಳಕೆ ಮಾಡಿಕೊಳ್ಳುವ ಪವೃತ್ತಿಯನ್ಬು ರಾಜಕೀಯ ನಾಯಕರು ಬೆಳೆಸಿಕೊಂಡಿದ್ದಾರೆ ಎಂದು ಪಂಚಮಸಾಲಿ ಶ್ರೀ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಲ್ಲದಿದ್ದರೂ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ. ಮುಖ್ಯ ಮಂತ್ರಿಗಳು ಈ ವಿಚಾರ ಕುರಿತು ಸಕಾರತಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದರು.

ನಮ್ಮ ಇಡೀ ಸಮುದಾಯ, ಪಂಚಾಮ ಸಾಲಿ ಮಠ ವಿನಯ್ ಕುಲಕರ್ಣಿ ಜೊತೆಗಿದೆ. ಇಡೀ ಧಾರವಾಡದಲ್ಲಿ ವಿನಯ್ ಕುಲಕರ್ಣಿ ಏನೆಂಬುದು ಗೊತ್ತಿದೆ. ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಪ್ರಯತ್ನ ನಡೆಸಿರುವುದು ಸರಿಯಲ್ಲ. ದ್ವೇಷ ರಾಜಕಾರಣ ಮಾಡುವುದು ಸರಿಯಲ್ಲ. ಈ ನಡೆ ಒಳ್ಳೆಯದಲ್ಲ. ಮುಖ್ಯಮಂತ್ತಿಗಳು ಮಧ್ಯ ಪ್ರವೇಶಿಸಿ ಇದನ್ನು ಸರಿಪಡಿಸಬೇಕು. ಇಡೀ ಧಾರವಾಡಕ್ಕೆ ಗೊತ್ತಿದೆ ಯಾರು ದ್ವೇಷ ರಾಜಕೀಯ ಮಾಡುತ್ತಾರೆ ಎಂದು‌ ಇಂತಹ ನಡೆ ಸರಿಯಲ್ಲ ಎಂದು ಕಿಡಿಕಾರಿದರು.

ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ ಹಾಗೂ ರಾಜ್ಯ ನಾಯಕರ ಕೈವಾಡ ಇದೆ ಎಂದು ಶ್ರೀಗಳು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ