ರಾಜ್ಯ

ಬೆಂಗಳೂರು ಮಳೆ ಅವಾಂತರ; ಗೋಡೆ ಕುಸಿದು ಕಾರ್ಮಿಕ ಸಾವು

Srinivasamurthy VN

ಬೆಂಗಳೂರು: ನಗರದಲ್ಲಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದು, ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಇಸ್ಕಾನ್ ಬಳಿಯ ಖಾಸಗಿ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ಪುರಂಪೂಜಾರಿ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರ್ಖಾನೆಯ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು ಜನತೆ
ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸುಮಾರು 20 ಮಿಮಿ ಗೂ ಹೆಚ್ಚು ಮಳೆಯಾಗಿದೆ, ಸಂಜೆ 6 ಗಂಟೆಯಿಂದ ಆರಂಭವಾದ ಮಳೆ ರಾತ್ರಿ 11ರ ವರೆಗೂ ಸುರಿಯತು, ಆದರೆ ಯಾವುದೇ ಪ್ರವಾಹ ಮತ್ತು ಹಾನಿಯ ವರದಿಯಾಗಗಿಲ್ಲ ಎಂದು ಬಿಬಿಎಂಪಿ ಕಂಟ್ರೋಲ್ ರೂಮ್ ಅಧಿಕಾರಿಗಳು ತಿಳಿಸಿದ್ದಾರೆ.ಇನ್ನೂ ಎರಡು ದಿನ  ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

SCROLL FOR NEXT