ಯಡಿಯೂರಪ್ಪ 
ರಾಜ್ಯ

ದೀಪಾವಳಿ ವೇಳೆ ಪಟಾಕಿ ಬ್ಯಾನ್: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದೀಪಾವಳಿ ಹಬ್ಬದ ವೇಳೆ ಪಟಾಕಿ ನಿಷೇಧ ಮಾಡಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ದೀಪಾವಳಿ ಹಬ್ಬದ ವೇಳೆ ಪಟಾಕಿ ಮಾರುವಂತಿಲ್ಲ ಹಾಗೂ ಪಟಾಕಿ ಹಚ್ಚುವಂತಿಲ್ಲ ಎಂದು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಶೀಘ್ರವೇ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಹೇಳಿದ್ದಾರೆ. ಇನ್ನೂ ಸರ್ಕಾರದ ನಿರ್ಧಾರದಿಂದ ಪಟಾಕಿ ಮಾರಾಟಾರರಿಗೆ  ಮತ್ತು ಪಟಾಕಿ ಖರೀದಿಸಿದ್ದವರಿಗೆ ಶಾಕ್ ಉಂಟಾಗಿದೆ.

ರಾಜ್ಯ ಸರ್ಕಾರ ಪಟಾಕಿ ನಿಷೇಧ ಮಾಡಿರುವ ನಿರ್ಧಾರಕ್ಕೆ ಪರ ಹಾಗೂ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಆದರೆ ಸಂಪ್ರದಾಯವಾದಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಾರೆ. ಪಟಾಕಿ ಸಿಡಿಸುವುದರಿಂದ ಪರಿಸರ ಹಾನಿ ಆಗುತ್ತದೆ ಎಂದರೆ ಪರಿಸರಕ್ಕೆ ಹಾನಿಯಾಗುವ ಎಲ್ಲವನ್ನೂ ನಿಷೇಧ ಮಾಡಿ ಎಂಬುವುದು ಸಂಪ್ರದಾಯವಾದಿಗಳ ವಾದವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT