ಸಾಂದರ್ಭಿಕ ಚಿತ್ರ 
ರಾಜ್ಯ

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು

ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಚಾಮರಾಜನಗರ: ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಆನಂದ್(28)  ಮತ್ತು ಆರ್.ಎಸ್.ದೊಡ್ಡಿ ಗ್ರಾಮದ  ಸಿದ್ದರಾಜು(28) ಮೃತ ದುರ್ದೈವಿಗಳು. 

ಮೃತರು ಎಳನೀರು ವ್ಯಾಪಾರಿಗಳಾಗಿದ್ದು   ವ್ಯವಹಾರ ಕುದುರಿಸಿ ಊರಿಗೆ ತೆರಳ ಬೇಕಾದರೆ ಬೆಂಗಳೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಟೆಂಪೋ ಟ್ರಾವೆಲ್ಲರ್ ನಲ್ಲಿ  8 ಮಂದಿ ಇದ್ದರು ಎಂದು ತಿಳಿದುಬಂದಿದ್ದು,  ಘಟನೆ ನಡೆದ ಕೂಡಲೇ ಚಾಲಕ ಪರಾರಿಯಾಗಿದ್ದಾನೆ. 
ಬೈಕ್ ಸವಾರ ಆನಂದ್ ಸ್ಥಳದಲ್ಲೇ ಮೃತಪಟ್ಟರೇ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾನೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗುಳಿಪುರ ನಂದೀಶ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!