ರಾಜ್ಯ

ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಮೂರು ದಿನ ಸಿಬಿಐ ಕಸ್ಟಡಿ: ಕೋರ್ಟ್ ಆದೇಶ

Raghavendra Adiga

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ವಿನಯ್ ಕುಲಕರ್ಣಿಯವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ಒಪ್ಪಿಸಿ ಧಾರವಾಡದ 32ನೇ ಸೆಷನ್ಸ್​ ಕೋರ್ಟ್ ಆದೇಶ ಹೊರಡಿಸಿದೆ.

ಗುರುವಾರ ಬೆಳಿಗ್ಗೆ ಸಿಬಿಐ  ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವರನ್ನು ವಶಕ್ಕೆ ಪಡೆದಿತ್ತು. ಸಂಜೆ ವೇಳೆಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆ ವೇಳೆ ವಿಚಾರಣೆ ನಡೆಸಿದ್ದ ಕೋರ್ಟ್ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿತ್ತು. 

ಇಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆ ಮತ್ತೆ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಷ್ಟೇ ಅಲ್ಲದೆ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು, ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ವಿನಯ್ ಕುಲಕರ್ಣಿಯವರನ್ನು ಕಸ್ಟಡಿಗೆ ನೀಡಿ ಆದೇಶಿಸಿದೆ,

SCROLL FOR NEXT