ಡಿಸಿಎಂ ಅಶ್ವತ್ಥ್ ನಾರಾಯಣ್ 
ರಾಜ್ಯ

ಅಂಗನವಾಡಿ ಹಂತದಿಂದಲೇ ಶಿಕ್ಷಣ ವ್ಯವಸ್ಥಿತವಾಗಿರಬೇಕು: ಡಿಸಿಎಂ ಅಶ್ವತ್ಥ್ ನಾರಾಯಣ್

ಒಂದನೇ ತರಗತಿಯಿಂದಲ್ಲ ಅಂಗನವಾಡಿ ಹಂತದಿಂದಲೇ ಶಿಕ್ಷಣ ವ್ಯವಸ್ಥಿತವಾಗಿರಬೇಕೆಂದು ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಬೆಂಗಳೂರು: ಒಂದನೇ ತರಗತಿಯಿಂದಲ್ಲ ಅಂಗನವಾಡಿ ಹಂತದಿಂದಲೇ ಶಿಕ್ಷಣ ವ್ಯವಸ್ಥಿತವಾಗಿರಬೇಕೆಂದು ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ, 

ಬೆಂಗಳೂರಿನ ಮಲ್ಲೇಶ್ವರಂದಲ್ಲಿ ಸಿಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನ ಹಾಗೂ ಅಕಾಡೆಮಿ ಆಫ್ ಕ್ರಿಯೇಟಿವ್ ಲರ್ನಿಂಗ್ ವತಿಯಿಂದ ಅಂಗನವಾಡಿ ಶಿಕ್ಷಕಿಯರ ತರಬೇತಿಯ ಮುಕ್ತಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂಗನವಾಡಿ ಹಂತದಲ್ಲಿಯೇ ಮಕ್ಕಳಿಗೆ ಭಾಷೆ ಸೇರಿದಂತೆ ಬಹು ವಿಷಯಗಳ ಕಲಿಕೆಯ ಶಕ್ತಿ ಹೆಚ್ಚಾಗಿರುತ್ತದೆ. ಒಂದು ಅಂದಾಜಿನ ಪ್ರಕಾರ ನಾಲ್ಕರಿಂದ ಆರು ವರ್ಷದ ವಯಸ್ಸಿನ ಮಗುವಿಗೆ 13 ಭಾಷೆಗಳನ್ನು ಕಲಿಯುವ ಸಾಮರ್ಥ್ಯವಿರುತ್ತದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟು ಪುಟ್ಟ ಮಕ್ಕಳಿಗೆ ಬೋಧನೆ ಮಾಡಬೇಕಿದೆ ಎಂದು ಹೇಳಿದ್ದಾರೆ. 

ಪ್ರಸ್ತುತ ಅಂಗನವಾಡಿ ವ್ಯವಸ್ಥೆ, ಅಂದರೆ ಔಪಚಾರಿಕವಾಗಿ ಶಿಕ್ಷಣ ನೀಡುವ ವ್ಯವಸ್ಥೆ ಈವರೆಗೆ ಇರಲಿಲ್ಲ. ಇದು ಮುಂದೆ ಈ ವ್ಯವಸ್ಥೆ ಅಮೂಲಾಗ್ರವಾಗಿ ಬದಲಾಗಲಿದೆ. ಆರಂಭದ ಹಂತದಲ್ಲಿಯೇ ಮಕ್ಕಳಿಗೆ ಶೈಕ್ಷಣಿಕವಾಗಿ ಗಟ್ಟಿ ತಳಪಾಯ ಬೀಳುವ ಅಗತ್ಯವಿದೆ. ಈ ಬಗ್ಗೆ ಸರ್ಕಾರವೂ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ