ರಾಜ್ಯ

ಕಾಫಿ ಡೇ ಮಾಲೀಕ ಸಿದ್ದಾರ್ಥ್ ಪತ್ನಿಗೆ ಬಂಧನ ಭೀತಿ: ಮಾಳವಿಕಾ ವಿರುದ್ಧ ಅರೆಸ್ಟ್ ವಾರೆಂಟ್

Shilpa D

ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿಗೆ ಈಗ ಬಂಧನದ ಭೀತಿ ಎದುರಾಗಿದೆ. 

ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ ಎಂಟು ಜನರ ವಿರುದ್ಧ ಮೂಡಿಗೆರೆ ಜೆಎಂಎಫ್ ಸಿ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ.

ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆಯು ಹಣವನ್ನು ಪಾವತಿಸಿರಲಿಲ್ಲ. 100 ಕೋಟಿಗೂ ಅಧಿಕ ಹಣವನ್ನು ಬೆಳಗೆಗಾರರಿಗೆ ನೀಡದೇ ಬಾಕಿ ಉಳಿಸಿಕೊಳ್ಳಲಾಗಿತ್ತು. 

ಹೀಗಾಗಿ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ ಎಂಬುವವರು ಚೆಕ್ ಬೌನ್ಸ್ ಪ್ರಕರಣವನ್ನು ದಾಖಲಿಸಿದ್ದರು. ಎಬಿಸಿ ಕಂಪನಿ 45 ಲಕ್ಷ ಹಣ ನೀಡಬೇಕು ಆದರೆ ಕೇವಲ 4 ಲಕ್ಷ ಮಾತ್ರ ನೀಡಿದೆ, ಉಳಿದ ಹಣವನ್ನು ಚೆಕ್  ನಲ್ಲಿ ನಮೂದಿಸಿಲ್ಲ, ಅವರು ನೀಡಿದ್ದ ಚೆಕ್ ಕೂಡ ಬೌನ್ಸ್ ಆಗಿದೆ ಎಂದು ನಂದೀಶ್ ತಿಳಿಸಿದ್ದಾರೆ.

ಇದಕ್ಕೆ ಕಂಪನಿಯ ನಿರ್ದೇಶಕಿ ಮಾಳವಿಕಾ ಹೆಗ್ಡೆ ಹೊಣೆಗಾರರಾಗಿದ್ದು, ಬಂಧನಕ್ಕೊಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT