ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೋವಿಡ್-19 ಬಗ್ಗೆ ಜನರಲ್ಲಿ ಹೆಚ್ಚಾಗುತ್ತಿರುವ ಅಲಕ್ಷ್ಯ, ಗ್ರಾಮ ಮಟ್ಟದ ಕಾರ್ಯಪಡೆಗೆ ಪುನರುಜ್ಜೀವನ

ಕೋವಿಡ್ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಅನೇಕರು ಅಲಕ್ಷ್ಯವಹಿಸಿದ್ದು, ಕೋವಿಯಡ್ ನಿರ್ಬಂಧಗಳ ಬಗ್ಗೆ ನಿಗಾ ವಹಿಸಲು ಮತ್ತು ಜಾಗೃತಿ ಮೂಡಿಸಲು ಮಂಡ್ಯದ ಅಧಿಕಾರಿಗಳು ಗ್ರಾಮ ಮಟ್ಟದ ಕಾರ್ಯಪಡೆ ತಂಡಗಳನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.

ಮಂಡ್ಯ: ಕೋವಿಡ್ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಅನೇಕರು ಅಲಕ್ಷ್ಯವಹಿಸಿದ್ದು, ಕೋವಿಯಡ್ ನಿರ್ಬಂಧಗಳ ಬಗ್ಗೆ ನಿಗಾ ವಹಿಸಲು ಮತ್ತು ಜಾಗೃತಿ ಮೂಡಿಸಲು ಮಂಡ್ಯದ ಅಧಿಕಾರಿಗಳು ಗ್ರಾಮ ಮಟ್ಟದ ಕಾರ್ಯಪಡೆ ತಂಡಗಳನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಲ್ಲಿ ಕೋವಿಡ್-19 ಪ್ರಕರಣಗಳು ಮತ್ತು ಮರಣ ಪ್ರಮಾಣ ತೀವ್ರಗತಿಯಲ್ಲಿ ಕುಸಿತವಾಗಿದ್ದು, ಸದ್ಯ 819 ಸಕ್ರಿಯ ಪ್ರಕರಣಗಳಿವೆ. 

ಬದಲಾಗುತ್ತಿರುವ ಪರಿಸ್ಥಿತಿ ಮತ್ತು ಎಲ್ಲಾ ಚಟುವಟಿಕೆಗಳು ನಡೆಯುತ್ತಿರುವುದರೊಂದಿಗೆ ಅನೇಕ ಜನರು ಕೋವಿಡ್ ಮಾನದಂಡಗಳನ್ನು ಅನುಸರಿಸುತ್ತಿಲ್ಲ. ಹೀಗಾಗಿ ಕಾರ್ಯಪಡೆಯನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ.

ಅಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ವಾಟರ್ ಮೆನ್, ಶಿಕ್ಷಕರು ಮತ್ತಿತರ ಸಿಬ್ಬಂದಿಗಳು ಬೀದಿಗಳಲ್ಲಿ ತೆರಳಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಪಾಲನೆ ಮತ್ತಿತರ ಸುರಕ್ಷತಾ ಕ್ರಮಗಳು ಹಾಗೂ ದೆಹಲಿ, ಕೇರಳದಂತಯೇ ಎರಡನೇ ಅಲೆ ಸಾಧ್ಯತೆ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಪಿ. ಮಂಚೇಗೌಡ ಹೇಳಿದರು.

ನಿಯಮ ಉಲ್ಲಂಘನೆಯ ಬಗ್ಗೆ ಎಚ್ಚರಿಕೆ ವಹಿಸಲು ತಂಡವು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಹಕರಿಸಲಿದೆ. ತಾಲೂಕ್ ಮಟ್ಟದ ಜಾಗೃತಿ ಮೆರವಣಿಗೆ ಕೂಡಾ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT