ರಾಜ್ಯ

ದೀಪಾವಳಿಗೆ ಕೆಎಸ್ ಆರ್ ಟಿಸಿಯಿಂದ 1,000 ಹೆಚ್ಚುವರಿ ಬಸ್

Lingaraj Badiger

ಬೆಂಗಳೂರ: ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‍ಆರ್ ಟಿಸಿ 1,000 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಿದೆ.

ಈ ಹೆಚ್ಚುವರಿ ಬಸ್ ಗಳು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲಿವೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬೆಳಗಾವಿ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,ಕೊಪ್ಪಳ, ಯಾದಗರಿ, ಬೀದರ್ ಹಾಗೂ ತಿರುಪತಿಗೆ ಹೆಚ್ಚುವರಿ ಬಸ್ ಗಳು ತೆರಳಲಿವೆ.

ನವೆಂಬರ್ 16 ರಂದು ರಾಜ್ಯದ ವಿವಿಧ ಸ್ಥಳಗಳಿಂದ ಮತ್ತು ಅಂತರರಾಜ್ಯಗಳಿಂದ ಬೆಂಗಳೂರಿಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ, ಮೈಸೂರು, ಹುಣಸೂರು, ಕುಶಾಲನಗರ, ಮಡಿಕೇರಿಗೆ ಬಸ್ ಗಳು ಸಂಚರಿಸಲಿವೆ. 

ಶಾಂತಿನಗರ ಬಸ್ ನಿಲ್ದಾಣದಿಂದ ಹೊರರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳ ವಿವಿಧ ನಗರಗಳಿಗೆ ವಿಶೇಷ ಬಸ್ ಗಳು ತೆರಳಲಿವೆ. 

ಪ್ರಯಾಣಿಕರಿಗೆ ಮುಂಗಡ ಬುಕ್ಕಿಂಗ್ ಕಾಯ್ದಿರುವ ಸೌಲಭ್ಯ ಕೂಡ ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕಿಂಗ್ ವೆಬ್ ಸೈಟ್ www.ksrtc.in ಮೂಲಕ ಪಡೆಯಬಹುದಾಗಿದೆ.

SCROLL FOR NEXT