ರಾಜ್ಯ

ಶಿರಾ, ಆರ್ ಆರ್ ನಗರ ಉಪಚುನಾವಣೆ ಫಲಿತಾಂಶ: ಬಿಜೆಪಿ ಅಭ್ಯರ್ಥಿಗಳ ಮುನ್ನಡೆ 

Srinivas Rao BV

ತುಮಕೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದರೆ, ಶಿರಾದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಷೇತ್ರದಲ್ಲಿ ಮೊದಲ ಬಾರಿಗೆ ಖಾತೆ ತೆರೆಯುವ ಮುನ್ಸೂಚನೆ ಇದೆ. 

ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಎದುರಾಳಿ ಮಾಜಿ ಸಚಿವ ಜಯಚಂದ್ರ ವಿರುದ್ಧ 1,488 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದು, 14,206 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

5 ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 12,718 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ 8,879 ಮತಗಳಿಂದ ಮೂರನೇ ಸ್ಥಾನದಲ್ಲಿದ್ದಾರೆ.

ತುಮಕೂರಿನ ಶಿರಾದಲ್ಲಿ ದುರ್ಬಲವಾಗಿದ್ದ ಬಿಜೆಪಿಯನ್ನು ಗೆಲ್ಲಿಸಲು ಬಿಜೆಪಿ ಈ ಬಾರಿ ಪಣ ತೊಟ್ಟಿತ್ತು. ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಈ ಬಾರಿ ಶಿರಾದಲ್ಲಿ ಕೆಆರ್ ಪೇಟೆ ಉಪಚುನಾವಣೆ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು.

SCROLL FOR NEXT