ರಾಜ್ಯ

ನೂತನ ಶಾಸಕ ಮುನಿರತ್ನಗೆ ಹೈಕೋರ್ಟ್ ಶಾಕ್! ನಕಲಿ ಗುರುತಿನ ಚೀಟಿ ಪ್ರಕರಣದ ಪರಿಶೀಲನೆಗೆ ಸೂಚನೆ

ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಬೆಂಗಳೂರು: ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಪೋಲೀಸರು ಸರಿಯಾದ ಕ್ರಮದಲ್ಲಿ ತನಿಖೆ ಮಾಡಿಲ್ಲ ಅದಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪಿಠ ವಿಚಾರಣೆ ನಡೆಸಿ ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೆ ಎಲ್ಲವೆ ನ್ನುವುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಕ ಮಾಡಬೇಕು. ಅವರು ಪರಿಶೀಲನೆ ನಡೆಸಿ ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿಕೋರ್ಟ್ ಗೆ ವರದಿ ನೀಡಬೇಕು ಎಂದು ಆದೇಶಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ನಿಗದಿ ಮಾಡಲಾಗಿದೆ.

ಮುನಿರತ್ನ ಅವರು ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನಿಂದ ಸ್ಪರ್ಧಿಸಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆ ಫಲಿತಾಂಶ ನಿನ್ನೆ (ಮಂಗಳವಾರ) ಘೋಷಣೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT