ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ 
ರಾಜ್ಯ

ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಅಗ್ನಿ ಅವಘಡ: ಸಮಗ್ರ ತನಿಖೆಗೆ ಗೃಹ ಸಚಿವ ಬೊಮ್ಮಾಯಿ ಆದೇಶ

ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು: ಬೆಂಗಳೂರು ರಸಾಯನಿಕ ಕೈಗಾರಿಕೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ.

ವಿಧಾನ ಸೌಧದಲ್ಲಿ ಮಾನವ ಕಳ್ಳ ಸಾಗಾಣಿಕೆ ನಿಷೇಧ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಬೆಂಗಳೂರಿನ ಮೈಸೂರು ರಸ್ತೆಯ ಹೊಸ ಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿನ್ನೆಯಿಂದ ಇದುವರೆಗೂ ಬೆಂಕಿ ಆರಿಸುವ ಕೆಲಸ ನಡೆದಿದೆ.  ಅಗ್ನಿಶಾಮಕ ದಳದ ಪ್ರಯತ್ನದಿಂದ ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫ್ಯಾಕ್ಟರಿ ನಿರ್ಮಿಸಲು ಬಿಬಿಎಂಪಿ ಸೇರಿದಂತೆ ಅಗ್ನಿಶಾಮಕ ಇಲಾಖೆ, ಪರಿಸರ ಇಲಾಖೆಗಳಿಂದ ಸಂಸ್ಥೆಯ ಮಾಲೀಕರು ಅನುಮತಿ ತೆಗೆದು ಕೊಂಡಿದ್ದರಾ? ಎಂಬುದರ ಬಗ್ಗೆ ತನಿಖೆ ನಡೆಸಲು ಆಯುಕ್ತರಿಗೆ ಸೂಚಿಸಿದ್ದೇನೆ. ಪ್ರಕರಣದಲ್ಲಿ  ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

'ರಸಾಯನಿಕ ಕೈಗಾರಿಕೆ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು 48 ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿ ನಂದಿಸಲಾಗಿದೆ. ಗೋದಾಮಿನಲ್ಲಿ ಸ್ಪೋಟಕ ಮತ್ತು ಅಪಾಯಕಾರಿ ವಸ್ತುಗಳನ್ನು ಇಡಲು ಅನುಮತಿ ಇದೆಯಾ? ಎಂಬುದರ ಮಾಹಿತಿ ಪಡೆಯುತ್ತಿದ್ದೇನೆ.ಇದನ್ನು ಬಹಳ ಗಂಭೀರವಾಗಿ  ತೆಗೆದುಕೊಂಡಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿದ್ದೇವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಹಿರಿಯ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ನಡೆಸಿ, ಒಂದುವೇಳೆ ಅಧಿಕಾರಿಗಳು ಲೋಪ ಎಸಗಿರುವು ಕಂಡು ಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇನೆ. ಯಾವುದೇ  ಅಧಿಕಾರಿ ಲಾಭಕ್ಕಾಗಿ ಅನುಮತಿ ನೀಡಿದ್ದರೆ ಅಂತಹ ಅಧಿಕಾರಿ ವಿರುದ್ಧವೂ ಕ್ರಮ ಕೈಗೊಳ್ಳುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.

ಬಾಪೂಜಿ ನಗರದ ಬಳಿ ಇರುವ ಹೊಸಗುಡ್ಡದಹಳ್ಳಿಯ ರೇಖಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಿನ್ನೆ ಸ್ಯಾನಿಟೈಸರ್ ಮತ್ತು ಪೇಂಟ್ ರಿಮೂವ್ ಮಾಡುವ ಕೆಮಿಕಲ್ ತಯಾರಿಸುತ್ತಿದ್ದ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಲೋಕಲ್ ಆಗಿ ಸ್ಯಾನಿಟೈಸರ್ ಹಾಗೂ ಪೈಂಟ್ ರಿಮೂವಲ್ ಕೆಮಿಕಲ್ ಅನ್ನು ತಯಾರಿಸುತ್ತಿದ್ದ  ಕಂಪನಿ ಇದಾಗಿದ್ದು, ಸ್ಯಾನಿಟೈಸರ್ ಮತ್ತು ಹ್ಯಾಂಡ್ ವಾಶ್ ಗೆ ಬಳಸುವ ಕೆಮಿಕಲ್ ಬ್ಯಾರಲ್ ಸ್ಫೋಟಗೊಂಡು ಗೋದಾಮು ಹೊತ್ತಿ ಉರಿದಿತ್ತು. ಗೋದಾಮು ಪಕ್ಕದ ಮೂರು ಮನೆಗಳಿಗೆ ಹಾನಿ‌ಯಾಗಿದೆ. ಕಟ್ಟಡದಲ್ಲಿ ವಾಸವಿದ್ದ ಹದಿನೈದಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರ ‌ಮಾಡಲಾಗಿದೆ ಎಂದು ಪೊಲೀಸ್  ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!