ರಾಜ್ಯ

ಕ್ರಿಕೆಟ್ ಬೆಟ್ಟಿಂಗ್: ಆರೋಪಿಯ ಬಂಧನ, 4 ಲಕ್ಷ ರೂ. ನಗದು ವಶ

Manjula VN

ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 4 ಲಕ್ಷ ರೂ.ನಗದು ಮತ್ತು 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

ವರ್ತೂರು ಹಳೇ ಅಂಚೇ ಕಚೇರಿ ಹತ್ತಿರ ಮಸ್ಜಿದ್ ರೋಡ್ ನಿವಾಸಿ ಶಬ್ಬೀರ್ ಖಾನ್ (32) ಬಂಧಿತ ಆರೋಪಿ.

ನವೆಂಬರ್ 10ರಂದು ನಡೆದ ಐಪಿಎಲ್ ಕ್ರಿಕೆಟ್ ನಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ ತಂಡಗಳ ನಡುವಿನ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಈ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಫೋನ್ ಮೂಲಕ ಬೆಟ್ಟಿಂಗ್ ರೇಶ್ಯೂವನ್ನು ನೋಡಿಕೊಂಡು, ಮೊಬೈಲ್ ಫೋನ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು. 

ಹಿಂದಿನ ಪಂದ್ಯಕ್ಕೆ ಸಂಬಂಧಪಟ್ಟಂತೆ ಗೆದ್ದವರಿಗೆ ಹಣ ಕೊಡಲು ಮತ್ತು ಸೋತವರಿಂದ ಹಣ ಪಡೆಯಲು ಒಬ್ಬ ಅಸಾಮಿಯು ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ವರ್ತೂರು ಪೊಲೀಸ್ ಠಾಣೆ ಹತ್ತಿರವಿರುವ ನಂದಿನಿ ಟೀ ಸ್ಟಾಲ್ ಅಂಗಡಿಯ ಮುಂಭಾಗದ ರಸ್ತೆಯಲ್ಲಿ ಬರುವುದಾಗಿ ಖಚಿತ ಮಾಹಿತಿ ಸಂಗ್ರಹಿಸಿದ ಕೇಂದ್ರ ಅಪರಾಧ ವಿಭಾಗ-ಸಿಸಿಬಿಯ ವಿಶೇಷ ವಿಚಾರಣಾ ದಳದ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ 4 ಲಕ್ಷ ರೂ. ನಗದು, 1 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಆರೋಪಿ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ.

ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಕೆ.ಪಿ.ರವಿಕುಮಾರ್ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಎನ್.ಹನುಮಂತರಾಯ ನೇತೃತ್ವದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಎಚ್.ಸಿ.ಜಗದೀಶ್ ಹಾಗೂ ಸಿಬ್ಬಂದಿ  ಪಾಲ್ಗೊಂಡಿದ್ದರು.

SCROLL FOR NEXT