ಪ್ರಧಾನಿ ಮೋದಿ 
ರಾಜ್ಯ

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. 

ಎರಡು ವಿಧಾನಸಭಾ ಕ್ಷೇತ್ರಗಳ ಉಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಕನ್ನಡದಲ್ಲಿಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಸಂತಸ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕದ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಅತ್ಯಂತ ವಿಶೇಷವಾದದ್ದು. ಕೇಂದ್ರ ಹಾಗೂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಸುಧಾರಣಾ ಕಾರ್ಯಸೂಚಿಗಳ ಮೇಲೆ ಜನರು ಹೊಂದಿರುವ ಸ್ಥಿರ ವಿಶ್ವಾಸವನ್ನು ಇದು ಪುನಃದೃಢೀಕರಿಸುತ್ತದೆ. ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಜನರ ಬೆಂಬಲಕ್ಕೆ ನನ್ನ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. 

ಇದರಂತೆ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿ ಟ್ವೀಟ್ ಮಾಡಿ ಜನತೆಗೆ ಧನ್ಯವಾದಗಳನ್ನು ಹೇಳಿದ್ದಾರೆ. 

ಉಪಚುನಾವಣೆಯಲ್ಲಿನ ಅಭೂತಪೂರ್ವ ಗೆಲುವಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಕರ್ನಾಟಕದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದಿನಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ರಾಜ್ಯವು ಅಭಿವೃದ್ಧಿ ಸಾಧಿಸಲಿದೆ. ಬಿಜೆಪಿಗೆ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕಕ್ಕೆ ಧನ್ಯವಾದಗಳು ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ