ಮಹಿಳೆಯನ್ನು ಎಳೆಯುತ್ತಿರುವ ಸಿದ್ದು ಸವದಿ 
ರಾಜ್ಯ

ಬಾಗಲಕೋಟೆ: ಪುರಸಭೆ ಸದಸ್ಯೆಯನ್ನು ಎಳೆದಾಡಿದ ಬಿಜೆಪಿ ಶಾಸಕ, ಕೇಸ್ ದಾಖಲು

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮದೇ ಪಕ್ಷದ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರು ತಮ್ಮದೇ ಪಕ್ಷದ ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರನ್ನು ಎಳೆದಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ.

ನವೆಂಬರ್ 9ರಂದು ಈ ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪ್ರತಿಕ್ರಿಯಿಸಿದ ಬಾಗಲಕೋಟೆ ಎಸ್‌ಪಿ ಲೋಕೇಶ್ ಜಗಲಸರ್ ಅವರು, “ಪೊಲೀಸ್ ಉಪಸ್ಥಿತಿಯ ಹೊರತಾಗಿಯೂ, ಜನರು ಕಾನೂನುಬಾಹಿರ ರೀತಿಯಲ್ಲಿ ವರ್ತಿಸಿದರು. ನೆರೆದಿದ್ದ ಜನರನ್ನು ಚದುರಿಸಲು ಪೊಲೀಸರು ಯತ್ನಿಸಿದ್ದಾರೆ. ಈ ಕುರಿತು ಮಹಿಳಾ ಸದಸ್ಯರು ಯಾರೂ ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸದ ಕಾರಣ ನಾವೇ ಸುಯೋ ಮೋಟು ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದರು.

ನಾವು ಎಲ್ಲಾ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ರಾಜಕೀಯ ನಾಯಕರುನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದರು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಇದೆಯೇ ಎಂಬುದನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದರು.

ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್'ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ದು ಸವದಿಯವರು ಮಹಿಳೆಯನ್ನು ತಳ್ಳಾಡಿ ಅಸಭ್ಯ ವರ್ತನೆ ತೋರಿದ್ದಾರೆಂದು ಹೇಳಲಾಗುತ್ತಿದೆ. ನೂಕಾಟದ ಮಧ್ಯೆ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದು, ಶಾಸಕರ ಈ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ