ರಾಜ್ಯ

ರಾಜ್ಯದ ನೂತನ ಐಟಿ-ಬಿಟಿ ನೀತಿ ಬಿಡುಗಡೆ ಮಾಡಿದ ಡಿಸಿಎಂ ಅಶ್ವತ್ಥನಾರಾಯಣ

Lingaraj Badiger

ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ - 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.

ಇಂದು ನೂತನ ಐಟಿ-ಬಿಟಿ ನೀತಿ ಬಿಡುಗಡೆ ಮಾಡಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು, ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡಿದ್ದು, ನೂತನ ನೀತಿ ಇದಕ್ಕೆ ಪೂರಕವಾಗಿದೆ ಎಂದರು.

ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ಆರಂಭಿಸುತ್ತಿದ್ದು, ಈ ಸಮ್ಮೇಳನದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ನಗರಗಳಲ್ಲಿ ಪರಿಸರ ಸ್ನೇಹಿ ತಂತ್ರಜ್ಞಾನ ಅಳವಡಿಕೆ ಜೊತೆಗೆ ಬಂಡವಾಳ ಆಕರ್ಷಣೆಗೂ ಆದ್ಯತೆ ನೀಡಲಾಗುವುದು ಎಂದರು.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಿ, ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆಯನ್ನು ಸಿದ್ಧಪಡಿಸಲಿದೆ., ಮುಂದಿನ 5 ವರ್ಷಗಳಲ್ಲಿ ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯನ್ನು 300 ಶತಕೋಟಿ ಡಾಲರ್ ಗೆ ಏರಿಸುವ ಗುರಿ ಹೊಂದಲಾಗಿದೆ ಎಂದರು.

SCROLL FOR NEXT