ರಾಜ್ಯ

ಕೊರೋನಾ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗಳ ವಿರುದ್ಧ ಕಠಿಣ ಕ್ರಮ ಏಕಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

Vishwanath S

ಬೆಂಗಳೂರು: ಕೋವಿಡ್‌ ನಿಯಮಗಳನ್ನು ಪಾಲಿಸದ, ಮಾಸ್ಕ್ ಧರಿಸದ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಜನಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಕುರಿತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಸಂಸದ ತೇಜಸ್ವಿ ಸೂರ್ಯ ಮತ್ತು 8 ಇತರರಿಗೆ ದಂಡ ವಿಧಿಸಿದ ಉದಾಹರಣೆ ಉಲ್ಲೇಖಿಸಿದ ನ್ಯಾಯಪೀಠ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಿಲ್ಲವೇಕೆ ಎಂದು ಪ್ರಶ್ನಿಸಿದೆ.

ಲೆಟ್ಸ್‌ಜಿಕ್‌ ಫೌಂಡೇಷನ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ನ್ಯಾಯಪೀಠ, ಕೋವಿಡ್‌ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಮಾಸ್ಕ್ ಧರಿಸುವ ನಿಯಮಗಳನ್ನು ಪಾಲಿಸುವುದನ್ನು ಕಡ್ಡಾಯಗೊಳಿಸುವಂತೆ ಹಲವು ಆದೇಶಗಳನ್ನು ಹೊರಡಿಸಲಾಗಿದೆ. ಆದರೆ, ಸರ್ಕಾರ ಇದರ ಉಲ್ಲಂಘನೆ ತಡೆಯಲು ವಿಫಲವಾಗಿದೆ ಎಂದು ಆರೋಪಿಸಿದರು.

SCROLL FOR NEXT