ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಈ ಬಾರಿ ಬ್ರಿಗೇಡ್, ಎಂಜಿ ರೋಡಲ್ಲಿ ಹೊಸ ವರ್ಷಾಚರಣೆ ಸಂಭ್ರಮವಿಲ್ಲ?

ನಗರದ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದರೆ, ಕೊರೋನಾ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಈ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. 

ಬೆಂಗಳೂರು: ನಗರದ ಎಂ.ಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ಸಂಭ್ರಮಾಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು ಗುಂಪುಗೂಡಿದರೆ, ಕೊರೋನಾ ಸ್ಫೋಟಗೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಈ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡದಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ಬಿಬಿಎಂಪಿ ನಿರ್ಧರಿಸಿದೆ. 

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು, ಸಂಭ್ರಮಾಚರಣೆಗಿಂತ ಜೀವನ ಮುಖ್ಯವಾಗುತ್ತದೆ. ಈ ಹಿಂದೆಯೂ ಅನೇತ ಹಬ್ಬಗಳಲ್ಲಿ ಆಚರಣೆ ವೇಳೆ ನಿರ್ಬಂಧ ಹಾಕಲಾಗಿತ್ತು. ಹೀಗಾಗಿ ಹೊಸ ವರ್ಷದ ಸಂಭ್ರಮಾಚರಣೆಗೆ ತಡೆ ಹಾಕುವುದು ಒಳ್ಳೆಯದು. ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಮಾಡಿದರೆ ಸೋಂಕು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ ಎಂದು ಹೇಳಿದ್ದಾರೆ. 

ನಗರದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಅಂತೆಯೇ ಚಳಿಗಾಲವೂ ಆರಂಭವಾಗಿರುವುದರಿಂದ ಸೋಂಕು ಹರಡುವ ಭೀತಿಯಿದೆ. ಹೀಗಾಗಿ ಮನೆಗಳಲ್ಲಿಯೇ ಸರಳವಾಗಿ ಸಂಭ್ರಮಾಚರಣೆ ಮಾಡಿ ಎಂಬುದು ನಮ್ಮ ಸಲಹೆಯಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT