ಕೆಎಎಸ್ ಅಧಿಕಾರಿ ಸುಧಾ 
ರಾಜ್ಯ

ಕೆಎಎಸ್ ಅಧಿಕಾರಿ ಸುಧಾ ಅಕ್ರಮ ಆಸ್ತಿ ಪ್ರಕರಣ: ಇಡಿ, ಐಟಿ ನಿಗಾ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿರುವ ಮಾಹಿತಿ ಆಧರಿಸಿ ಜಾರಿ‌ ನಿರ್ದೇಶನಾಲಯ (ಇಡಿ ) ಹಾಗೂ ಆದಾಯ ಇಲಾಖೆ (ಐಟಿ) ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.

ಬೆಂಗಳೂರು: ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಬಿ. ಸುಧಾ ಅವರು ಬಿಡಿಎ ಅಧಿಕಾರಿಯಾಗಿದ್ದಾಗ ಅವರ ಖಾತೆಗೆ ಬಹಳಷ್ಟು ಹಣ ಜಮಾವಣೆಯಾಗಿರುವ ಮಾಹಿತಿ ಆಧರಿಸಿ ಜಾರಿ‌ ನಿರ್ದೇಶನಾಲಯ (ಇಡಿ ) ಹಾಗೂ ಆದಾಯ ಇಲಾಖೆ (ಐಟಿ) ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.

ಸುಧಾ ಅವರ ಅಕ್ರಮ ಆಸ್ತಿ ಸಂಬಂಧ ಎಸಿಬಿ ಅಧಿಕಾರಿಗಳು ತನಿಖೆ ನಡೆಸಿ ಜಪ್ತಿ‌ಮಾಡಿದ ದಾಖಲಾತಿಗಳನ್ನು ಆದಾಯ ಇಲಾಖೆ ಹಾಗೂ ಇಡಿಗೆ ಮಾಹಿತಿ ನೀಡಲಿದ್ದು ಇವೆರಡು ಇಲಾಖೆಗಳು ಮುಂದಿನ‌  ತನಿಖೆ ನಡೆಸಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕಳೆದ ಒಂದು ವಾರದಿಂದ ಸುಧಾ ಮತ್ತು ಕುಟುಂಬಸ್ಥರ ಆಸ್ತಿ, ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಎಸಿಬಿ, ಅವರ ಆಸ್ತಿಯ ವಿವರಕ್ಕೆ ಸಂಬಂಧಿಸಿದ 200ಕ್ಕೂ ಹೆಚ್ಚು ದಾಖಲೆಗಳನ್ನು ಈಗಾಗಲೇ ಜಪ್ತಿ ಮಾಡಿದೆ. ಆದರೆ, ಎಲ್ಲ ಮಾಹಿತಿಗಳನ್ನು ಸಂಗ್ರಹ‌ ಮಾಡಲು ಇನ್ನೂ ಸ್ವಲ್ಪ ಸಮಾಯವಾಕಾಶ ಬೇಕಾಗಬಹುದು ಎಂದು ತಿಳಿಸಿದೆ.

ಡಾ. ಬಿ. ಸುಧಾ ಅವರು ಭ್ರಷ್ಟಾಚಾರ, ಅವ್ಯಹಾರಗಳಲ್ಲಿ ಭಾಗಿಯಾದ ಸಂಬಂಧ ಎಸಿಬಿಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಏಳನೇ ತಾರೀಖಿನಂದು ಬೆಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಯ ಒಟ್ಟು 7 ಸ್ಥಳಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ, ಹಲವಾರು ಅಕ್ರಮ ಆಸ್ತಿಗಳು ಪತ್ತೆಯಾಗಿತ್ತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT