ಹೆದ್ದಾರಿಯಲ್ಲಿ ಸುಲಿಗೆಗೆ ಯತ್ನ; ನಾಲ್ವರು ದರೋಡೆಕೊರರ ಬಂಧನ
ರಾಜ್ಯ ಹೆದ್ದಾರಿಗಳ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರು ದರೋಡೆಕೊರರನ್ನು ಬಂಧಿಸುವಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು: ರಾಜ್ಯ ಹೆದ್ದಾರಿಗಳ ಬಳಿ ದರೋಡೆಗೆ ಹೊಂಚು ಹಾಕುತ್ತಿದ್ದ ನಾಲ್ವರು ದರೋಡೆಕೊರರನ್ನು ಬಂಧಿಸುವಲ್ಲಿ ನೆಲಮಂಗಲ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಲಮಂಗಲದ ಗಿರೀಶ್ (23), ಬಿ.ಎಸ್ ಗೋವಿಂದರಾಜು (22), ಅನೂಪ್ ಮೋಹನ್ (23) ಹಾಗೂ ಎಚ್.ಪಿ.ಪುನೀತ್ ಕುಮಾರ್ ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ರಘುಕುಮಾರ್(23) ಪರಾರಿಯಾಗಿದ್ದಾನೆ. ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ 6 ಬೈಕ್ಗಳು, 1 ಕಾರು, 7 ವಿವಿಧ ಬಗೆಯ ಮಾರಕಾಸ್ತ್ರಗಳು, ಖಾರದ ಪುಡಿ ಹಾಗೂ 4 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.