ಬಿ.ಎಸ್.ಯಡಿಯೂರಪ್ಪ 
ರಾಜ್ಯ

ಉಪಚುನಾವಣೆ ಗೆಲ್ಲಲು ತಂತ್ರ? ಮಸ್ಕಿ ನೀರಾವರಿ ಯೋಜನೆ, ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರ ಅನುಮೋದನೆ

ರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ  ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರು: ರಾಯಚೂರು ಜಿಲ್ಲೆಯ ಮಸ್ಕಿ ನಾಲಾ ನೀರಾವರಿ ಯೋಜನೆಗೆ ಮತ್ತು ಮರಾಠಾ ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ಸ್ಥಾಪನೆಗೆ  ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಈ ಕುರಿತು ಶುಕ್ರವಾರ ಆದೇಶಗಳನ್ನು ರವಾನಿಸಲಾಗಿದೆ.

ಎಡದಂಡೆ ಹಾಗೂ ಬಲದಂಡೆ ನಾಲೆಗಳು ಮತ್ತು ಅವುಗಳಪುನರ್ರಚನೆಗಾಗಿ 2018 -19 ರಲ್ಲಿ ನಿಗದಿಪಡಿಸಿದಂತೆ ಅಂದಾಜು 52.54 ಕೋಟಿ ರೂ.ಗಳ ವೆಚ್ಚದೊಂದಿಗೆ ವಿವರವಾದ ಯೋಜನಾ ವರದಿಗೆ (ಡಿಪಿಆರ್) ಆಡಳಿತಾತ್ಮಕ ಅನುಮತಿ ನೀಡಿದೆ ಎಂದು ಸರ್ಕಾರ ಹೇಳಿದೆ.

ನೀರಾವರಿ ಇಲಾಖೆಯ ಮೂಲಗಳ ಪ್ರಕಾರ, ಈ ಯೋಜನೆಯುಹೈದರಾಬಾದ್ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಇದು ಅಂತಿಮವಾಗಿ ಸರ್ಕಾರದ ಅನುಮೋದನೆ ಪಡೆದಿದೆ.

ಇದಲ್ಲದೆ 50 ಕೋಟಿ ರೂ.ಗಳ ಅನುದಾನದೊಂದಿಗೆ  ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೂ ಸಹ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶದಂತೆ "ರಾಜ್ಯದಲ್ಲಿ ಗಣನೀಯ ಪ್ರಮಾಣದ ಮರಾಠಿ ಬಾಷಿಗರು ಇರುವ ಕಾರಣ ದ, ಅವರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಅಭಿವೃದ್ಧಿಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು ಮತ್ತು ಈ ಉದ್ದೇಶಕ್ಕಾಗಿಹಣಕಾಸು ಇಲಾಖೆಯ ಒಪ್ಪಿಗೆಯೊಂದಿಗೆ 50 ಕೋಟಿ ರೂ. ಮೀಸಲಾಗಿಡಲಾಗಿದೆ.

ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಶೀಘ್ರವೇ ಉಪಚುನಾವಣೆಗಳು ನಡೆಯುವ ದೃಷ್ಟಿಯಿಂದ ಈ ಎರಡೂ ನಿರ್ಧಾರಕ್ಕೆ ಬರಲಾಗಿದೆ ಎಂದು ಆಡಳಿತ ವಲಯದ ಮೂಲಗಳು ತಿಳಿಸಿವೆ.

ಹಾಲಿ ಕಾಂಗ್ರೆಸ್ ಶಾಸಕ ಪ್ರತಾಪ್ ಗೌಡ ಪಾಟೀಲ್ 2019 ರಲ್ಲಿ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಮಸ್ಕಿ ವಿಧಾನಸಭಾ ಕ್ಷೇತ್ರ ಖಾಲಿ ಬಿದ್ದಿತು ಮತ್ತು ಇತರ 15 ಶಾಸಕರು ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟನ್ನು ಹುಟ್ಟುಹಾಕಿದ್ದರು. 

ಸೆಪ್ಟೆಂಬರ್ 24 ರಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆಗೊಳಪಟ್ಟ ಹಾಲಿ  ಕಾಂಗ್ರೆಸ್ ಶಾಸಕ ಬಿ ನಾರಾಯಣ್ ರಾವ್ ಅವರ ನಿಧನದ ತರುವಾಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಅಗತ್ಯವಾಗಿತ್ತು. ಉತ್ತರ ಕರ್ನಾಟಕದ ಬೀದರ್ ಜಿಲ್ಲೆಯ ಬಸವಕಲ್ಯಾಣ ಮಹಾರಾಷ್ಟ್ರದ ಗಡಿಯಲ್ಲಿದೆ. ಇದು ಗಣನೀಯಸಂಖ್ಯೆಯಲ್ಲಿ ಮರಾಠಾ ಭಾಷಿಗರನ್ನು ಹೊಂದಿದೆ.

ಕನ್ನಡ ಪರ ಹೋರಾಟಗಾರರ ವಿರೋಧ 

ಎಂಡಿಎ ಸ್ಥಾಪಿಸುವ ನಿರ್ಧಾರವು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ್ ಅವರುಗಳಿ ತೀವ್ರ ಟೀಕೆಗೆ ಕಾರಣವಾಗಿದೆ. ಮರಾಠಾ ಪ್ರಾಧಿಕಾರ ಸ್ಥಾಪನೆ ನಿರ್ಧಾರ ಮುಂಬರುವ ದಿನಗಳಲ್ಲಿ ತೆಲುಗು, ತಮಿಳು ಮತ್ತು ಮಲಯಾಳಂ ಅಭಿವೃದ್ಧಿ ಅಧಿಕಾರಿಗಳನ್ನು ಸ್ಥಾಪಿಸಲು ಕಾರಣವಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳು ತಕ್ಷಣ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!