ರಮೇಶ್ ಕಟ್ಟಿ 
ರಾಜ್ಯ

ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ರಮೇಶ್ ಕಟ್ಟಿ ಮತ್ತೊಮ್ಮೆ ಅವಿರೋಧ ಆಯ್ಕೆ 

ಬಿಜೆಪಿ ನಾಯಕ ರಮೇಶ್ ಕಟ್ಟಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕೂಡ ಅವರೇ ಅಧ್ಯಕ್ಷರಾಗಿದ್ದರು. 

ಬೆಳಗಾವಿ: ಬಿಜೆಪಿ ನಾಯಕ ರಮೇಶ್ ಕಟ್ಟಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಕೂಡ ಅವರೇ ಅಧ್ಯಕ್ಷರಾಗಿದ್ದರು. 

ಸ್ಥಾನಿಕ ಉಪಾಧ್ಯಕ್ಷ ಸುಭಾಷ್ ಧವಳೇಶ್ವರ ಕೂಡ ಮತ್ತೊಂದು ಅವಧಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ, ಡಿಸಿಸಿ ಬ್ಯಾಂಕ್ ಚುನಾವಣೆಗಳು ಪಕ್ಷದ ನಾಯಕರು ಮತ್ತು ವಿಭಾಗಗಳಲ್ಲಿ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಿದ್ದವು. ಜಿಲ್ಲೆಯ ಬಿಜೆಪಿಯಲ್ಲಿ ಮೂರು ಬಣಗಳು ಇದ್ದವು. ಆದರೆ ಈಗ ಪೈಪೋಟಿಯ ಹೊರತಾಗಿಯೂ, ಪಕ್ಷದ ಮೇಲಾಧಿಕಾರಿಗಳ ಸೂಚನೆಗಳನ್ನು ಅನುಸರಿಸಿ ಆಯ್ಕೆಯು ಸರ್ವಾನುಮತದಿಂದ ಕೂಡಿದೆ ಎಂದು ಬಿಜೆಪಿ ತಿಳಿಸಿದೆ.

ಉಪ ಮುಖ್ಯಮಂತ್ರಿ ಲಕ್ಷ್ಣಣ ಸವದಿಯವರು ಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿದ್ದು ನಿನ್ನೆ ಸುದ್ದಿಗೋಷ್ಠಿಯಲ್ಲಿ ಕಟ್ಟಿ ಮತ್ತು ಧವಳೇಶ್ವರ ಅವರ ಚುನಾವಣೆಯನ್ನು ಘೋಷಿಸಿದ್ದರು. ಬಿಜೆಪಿ ಉನ್ನತ ನಾಯಕರು ಇಬ್ಬರ ಅಭ್ಯರ್ಥಿತನವನ್ನು ಬೆಂಬಲಿಸಿದ್ದು ಬ್ಯಾಂಕ್ ಶತಮಾನೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ