ರಾಜ್ಯ

ಕರ್ನಾಟಕಕ್ಕೆ ಸಿಹಿ ದೀಪಾವಳಿ: ಇಂದು ರಾಜ್ಯದಲ್ಲಿ ಕೇವಲ 1,157 ಕೊರೋನಾ ಪ್ರಕರಣ ಪತ್ತೆ!

Vishwanath S

ಬೆಂಗಳೂರು: ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು ಕೇವಲ 1,157 ಪ್ರಕರಣ ಮಾತ್ರ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 8,62,804ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 12 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,541ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 2,188 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,25,141ಕ್ಕೆ ಏರಿಕೆಯಾಗಿದೆ. 26,103 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 597 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,57,877ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 6 ಮಂದಿ ಸಾವನ್ನಪ್ಪಿದ್ದಾರೆ.

SCROLL FOR NEXT