ಸಿಸಿಟಿವಿ ದೃಶ್ಯ 
ರಾಜ್ಯ

ಮಂಗಳೂರು: ಟೆಕ್ಸ್ ಟೈಲ್ಸ್ ಉದ್ಯಮಿಯ ಮೇಲೆ ತಲ್ವಾರ್ ದಾಳಿ, ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ನವೆಂಬರ್ 15 ರ ಭಾನುವಾರ ರಾತ್ರಿ ಬಜ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಕಂದಾವರದಲ್ಲಿ ಉದ್ಯಮಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 

ಮಂಗಳೂರು: ನವೆಂಬರ್ 15ರ ಭಾನುವಾರ ರಾತ್ರಿ ಬಜ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಕಂದಾವರದಲ್ಲಿ ಉದ್ಯಮಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಂದಾವರ ಕೈಕಂಬ ನಿವಾಸಿ ಅಬ್ದುಲ್ ಅಜೀಜ್ (58) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ 10.30 ರ ಸುಮಾರಿಗೆ ಅಬ್ದುಲ್ ಅಜೀಜ್ ನಮಾಜ್ ಮುಗಿಸಿದ ನಂತರ ಮಸೀದಿಯಿಂದ ತನ್ನ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಇದ್ದಕ್ಕಿದ್ದಂತೆ ತಲ್ವಾರ್ ನಿಂದ ಹಲ್ಲೆ ನಡೆಸಿದರು. ಹಲ್ಲೆಯಿಂದ ಅಬ್ದುಲ್ ಅವರ ತಲೆ, , ಕೈ ಮತ್ತು ಕಾಲಿಗೆ ಗಾಯಗಳಾಗಿದೆ. ಹಲ್ಲೆ ನಂತರ ಆರೋಪ್ಗಳು ಪರಾರಿಯಾಗಿದ್ದಾರೆ.

ದಾಳಿಯ ಸಂಪೂರ್ಣ ದೃಶ್ಯಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದು ವೈಯುಕ್ತಿಕ ದ್ವೇಷದ ಕಾರಣಕ್ಕೆ ನಡೆದ ದಾಳಿಎಂದು ಶಂಕಿಸಲಾಗಿದ್ದು ಗಾಯಗೊಂಡ ಅಜೀಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಂದಾವರ ಮಸೀದಿಯ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾದ ಅಜೀಜ್ ಟೆಕ್ಸ್ ಟೈಲ್ಸ್ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಬಜ್ಪೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT