ಸಂಪತ್ ರಾಜ್ ಬಂಧನ 
ರಾಜ್ಯ

ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಲಾಗಿತ್ತು.

ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಸಂಪತ್ ರಾಜ್ ಬಿದ್ದಿದ್ದು, ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದೀಗ ಸಂಪತ್ ರಾಜ್ ಅವರನ್ನು ನಗರ ಸಿಸಿಬಿ ಕಚೇರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

ವಿವಾದಿತ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300 ಮಂದಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ