ರಾಜ್ಯ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

Raghavendra Adiga

ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಇವರಲ್ಲಿ ಆರ್ಥಿಕವಾಗಿ,ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

ಆದರೆ ಆದೇಶದಲ್ಲಿ ನಿಗಮ ಸ್ಥಾಪನೆ,ಅನುದಾನ ಸೇರಿದಂತೆ ಯಾವುದೇ ಮಾಹಿತಿಯನ್ನು ತಿಳಿಸಿಲ್ಲ.ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು ಅಲ್ಲಿ ಅಂತಿಮ ತೀರ್ಮಾನ ಕೈಗೊಂಡು ಸರ್ಕಾರಿ ಆದೇಶ ಹೊರಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಎರಡು ದಿನಗಳ ಹಿಂದಷ್ಟೇ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ  ಆದೇಶ ಕೊಟ್ಟಿದ್ದ ಸರ್ಕಾರದ ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೂ ಗ್ರೀನ್ ಸಿಗ್ನಲ್ ಕೊಟ್ಟಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಬೆನ್ನಲ್ಲೇ ಲಿಂಗಾಯತ ಸಮುದಾಯದ ಸಚಿವರು ಮಾತ್ರವಲ್ಲದೆ ಕಾಂಗ್ರೆಸ್ ನಿಯೋಗವೂ ಸಹ ತಮ್ಮ ಸಮುದಾಯಕ್ಕೆ ಶೇ.16 ರಷ್ಟು ಮೀಸಲು ನೀಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿತ್ತು.

SCROLL FOR NEXT