ಗೃಹ ಸಚಿವ ಬಸವರಾಜ ಬೊಮ್ಮಾಯಿ 
ರಾಜ್ಯ

ಸಂಪತ್ ರಾಜ್ ಬಂಧನ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಸವರಾಜ ಬೊಮ್ಮಾಯಿ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಸುದ್ದಿಗಾರರ ಜೊತೆ ಮಾತನಾಡಿದ ಬೊಮ್ಮಾಯಿ, ಸಂಪತ್ ರಾಜ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ತಲೆಮರೆಸಿಕೊಂಡಿದ್ದು, ಸೋಮವಾರರಾತ್ರಿ ಸಿಸಿಬಿಯಿಂದ ಸಂಪತ್ ರಾಜ್ ರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿ ನಂತರ ಹೆಚ್ಚಿನ ತನಿಖೆಗೆ ಒಳಪಡಿಸಲಾಗುವುದು

ತನಿಖೆಯಲ್ಲಿ ಈ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. ಪ್ರಕರಣದಲ್ಲಿ ಸಂಪತ್ ರಾಜ್ ಬಂಧನ ಮಹತ್ವದ್ದಾಗಿತ್ತು. ಈಗಾಗಲೇ ‌ಇರುವ ಸಾಕ್ಷ್ಯಗಳು ಮತ್ತು ಸಂಪತ್ ರಾಜ್ ಬಂಧನದಿಂದ ಗಲಭೆಗೆ ಕಾರಣ ಯಾರು ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!