ರಾಜ್ಯ

ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ, ಎಸ್‍ಡಿಪಿಐ ಕಚೇರಿಗಳು ಸೇರಿ, ಬೆಂಗಳೂರಿನ 43 ಕಡೆ ಎನ್ಐಎ ಶೋಧ

Srinivasamurthy VN

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ)ದ ಕಚೇರಿಗಳು ಸೇರಿದಂತೆ 43 ಕಡೆ ಶೋಧನೆ ನಡೆಸಿದೆ.

ನಾಲ್ಕು ಎಸ್ಡಿಪಿಐ ಕಚೇರಿಗಳು ಸೇರಿದಂತೆ ನಗರದ ಒಟ್ಟು 43 ಕಡೆ ಎನ್ಐಎ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಶೋಧದ ಸಮಯದಲ್ಲಿ, ಎಸ್‌ಡಿಪಿಐ ಮತ್ತು ಪಿಎಫ್‌ಐಗೆ ಸಂಬಂಧಿಸಿದ ದೋಷಾರೋಪಣೆ ವಸ್ತುಗಳು ಮತ್ತು ಕತ್ತಿಗಳು, ಚಾಕುಗಳು, ಕಬ್ಬಿಣದ ಸರಳುಗಳಂತಹ ಶಸ್ತ್ರಾಸ್ತ್ರಗಳನ್ನು  ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಆಗಸ್ಟ್ 12ರಂದು ನಡೆದ ಈ ಗಲಭೆಯಲ್ಲಿ ಸಾವು, ನೋವು ಸಂಭವಿಸಿದ್ದಲ್ಲದೆ, ಡಿಜೆ ಹಳ್ಳಿ ಪೊಲೀಸ್ ಠಾಣೆ ಹಾಗೂ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ಅಖಂಡ ಶ್ರೀನಿವಾಸಮೂರ್ತಿ ನಿವಾಸಕ್ಕೆ ಬೆಂಕಿ ಹಚ್ಚಲಾಗಿತ್ತು . ಈ ಘಟನೆ ಆಸಂಬಂಧ 350ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.
 

SCROLL FOR NEXT