ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು..

ಎಸ್‌ಸಿ ಸಕ್ಸೇನಾ
Raghavendra Adiga
Updated On : 18 Nov 2020, 11:59 am

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಸ್ ಸಿ ಸಕ್ಸೇನಾ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬುಧವಾರ ಬೆಳಿಗ್ಗೆ 6:30ಕ್ಕೆ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತೀವ್ರ ಅನಾರೋಗ್ಯ ದಿಂದ ಬಳಲುತ್ತಿದ್ದ ಅವರು ಒಂದೂವರೆ ತಿಂಗಳು ಐಸಿಯೂನಲ್ಲಿ ಚಿಕಿತ್ಸೆ ಪಡೆದಿದ್ದರು. 10 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಜನರಲ್ ವಾರ್ಡ್ ಗೆ  ಸ್ಥಳಾಂತರಿಸಲಾಗಿತ್ತು. ಆದರೆ, ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾರೆ.

Advertisement

Advertisement

1976ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಸಕ್ಸೇನಾ  ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 2ಕ್ಕೆ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ ಎಂದು ಹೇಳಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments