ಮಹದೇವ ಪ್ರಕಾಶ್ 
ರಾಜ್ಯ

ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಒಂದೂವರೆ ವರ್ಷಗಳ ಹಿಂದೆ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರನ್ನು ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಇದೀಗ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ತಮ್ಮ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಹದೇವ ಪ್ರಕಾಶ್ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!