ರಾಜ್ಯ

ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿ ಅವಧಿ ವಿಸ್ತರಣೆ

Manjula VN

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪರ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. 

ಸಂಪತ್ ರಾಜ್ ಅವರನ್ನು ಶುಕ್ರವಾರ ಮಧ್ಯಾಹ್ನ 1.30ರವರೆಗೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಸಂಪತ್‌ರಾಜ್‌ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್‌ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ ಸಹಕರಿಸಿದವರ ತನಿಖೆ ನಡೆಸಬೇಕಿದೆ. ಎಲ್ಲಾ ಘಟನೆಗೆ ಸೋಷಿಯಲ್ ಮೀಡಿಯಾ ಬಳಕೆ ಕಾರಣ. ಹೀಗಾಗಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಕೆಲವು ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣ ಸಂಬಂಧ ತನಿಖೆ ಬಾಕಿ ಇದೆ ಎಂದು ವಿಚಾರಣೆ ವೇಳೆ ಸಿಸಿಬಿ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ 67ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿಯವರು ಸಂಪತ್ ರಾಜ್ ಅವರ ಸಿಸಿಬಿ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಿದ್ದಾರೆ. 

SCROLL FOR NEXT