ರಾಜ್ಯ

ಶಾಸಕರ ಮನೆಗೆ ಬೆಂಕಿ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಗೆ ಮತ್ತೆ 5 ದಿನ ನ್ಯಾಯಾಂಗ ಬಂಧನ

Raghavendra Adiga

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಹಾಗೂ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಮತ್ತೆ ಐದು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

ಪ್ರಕರಣದ 51ನೇ ಆರೋಪಿ ಸಂಪತ್ ರಾಜ್ ಅವರಿಗೆ ನವೆಂಬರ್ 24ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸುಮಾರು ಒಂದು ತಿಂಗಳು ನಾಪತ್ತೆಯಾಗಿದ್ದ ಸಂಪತ್ ರಾಜ್ ಅವರನ್ನು ಕಳೆದ ಮಂಗಳವಾರ ಸಿಸಿಬಿ ಪೋಲೀಸರು ಬಂಧಿಸಿದ್ದರು. ಸಿಸಿಬಿ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಸಂಪತ್ ರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು,

ವಿವಾದಿತ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300ಕ್ಕೂ ಹೆಚ್ಚು ಉದ್ರಿಕ್ತರ ಗುಂಪು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ ನಾನೂರಕ್ಕೂ ಹೆಚ್ಚು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 

SCROLL FOR NEXT