ಹೈಕೋರ್ಟ್ 
ರಾಜ್ಯ

ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು 

ಕನ್ನಡ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಯವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ರಾಜ್ಯ ಹೈಕೋರ್ಟ್, ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ, ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ವಿಧಿಸಿದೆ. 

ಬೆಂಗಳೂರು: ಕನ್ನಡ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಯವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ರಾಜ್ಯ ಹೈಕೋರ್ಟ್, ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ, ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ವಿಧಿಸಿದೆ. 

ಇದನ್ನು 20 ದಿನಗಳೊಳಗೆ ತನಿಖಾಧಿಕಾರಿ ಮುಂದೆ ಸಲ್ಲಿಸುವಂತೆ ಹಾಗೂ ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕರಿಸುವಂತೆ, ಕೋರ್ಟ್ ನ ಅನುಮತಿಯಿಲ್ಲದೆ ತ್ವರಿತ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗದಂತೆಯೂ ನ್ಯಾಯಮೂರ್ತಿಗಳಾದ ಬಿ ಎ ಪಾಟೀಲ್ ಆದೇಶ ಹೊರಡಿಸಿದ್ದಾರೆ. 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರ ಆರೋಪದ ಕಾರ್ಯಕ್ರಮ ಪವರ್ ಟಿವಿಯಲ್ಲಿ ಪ್ರಸಾರವಾಗಿತ್ತು.ಇದಾದ ಬಳಿಕ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ಚಂದ್ರಕಾಂತ್ ರಾಮಲಿಂಗಂ ರಾಕೇಶ್ ಶೆಟ್ಟಿ ವಿರುದ್ಧ ಬಿಡಿಎಯಿಂದ ಹಣ ಮಂಜೂರು ಮಾಡಿಸಲು ಲಂಚ ಕೇಳಿದ್ದರು ಎಂದು ದೂರು ನೀಡಿದ್ದರ ಮೇಲೆ ಬಂಧನವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

ವೈಮಾನಿಕ ದಾಳಿಗಳನ್ನು ಹಿಮ್ಮೆಟ್ಟಿಸಿದ ಕುವೈತ್; ಏಕಾಂಗಿ ಆಯ್ತಾ ಇರಾನ್?

ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು' ಕುರಿತು ಗಂಭೀರ ಚರ್ಚೆ

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ. ಆಗುತ್ತಾ 10 ಗ್ರಾಂ ಚಿನ್ನದ ರೇಟ್?

SCROLL FOR NEXT