ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ: ಸಚಿವ ಸುಧಾಕರ್

Manjula VN

ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸ್ಪಷ್ಟಪಡಿಸಿದರು. 

ನಗರದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನವರಿಯಿಂದ ಎಲ್ಲಾ ರೀತಿಯ ಪರೀಕ್ಷೆ ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ, ಸಿಟಿ ಸ್ಕ್ಯಾನ್, ರಕ್ತಪರೀಕ್ಷೆಗಳು ಎಲ್ಲವೂ ಉಚಿತವಾಗಿ ಮಾಡಲಾಗುವುದು. ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಯಾವುದೇ ಔಷಧಿ ಅಗತ್ಯವಿದ್ದರೂ ಸರ್ಕಾರ ಪೂರೈಸುತ್ತಿದೆ ಎಂದು ಹೇಳಿದ್ದಾರೆ. 

ಜನಸಂಖ್ಯೆ ಆಧರಿಸಿ ಹೆಚ್ಚುವರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭ, ಆ್ಯಂಬುಲೆನ್ಸ್ ಸೇವೆ ಬಲವರ್ಧನೆ ಮಾಡಲು ತೀರ್ಮಾನಿಸಲಾಗಿದೆ. ಶುಚಿತ್ವ ಇರುವುದಿಲ್ಲ ಎಂಬ ದೊಡ್ಡ ಆರೋಪ ಸರ್ಕಾರಿ ಆಸ್ಪತ್ರೆಗಳ ಮೇಲಿದೆ. ವಿಷಯ ಪರಿಣಿತಿ ಜತೆಗೆ ಆಡಳಿತಾತ್ಮಕ ಕೌಶಲ್ಯವನ್ನು ವೈದ್ಯರು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಸರ್ಕಾರಿ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದಾಗ್ಯೂ ಜನರಿಗೆ ಏಕೆ ಉತ್ತಮ ಸೌಕರ್ಯಗಳು ಸಿಗುತ್ತಿಲ್ಲ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಖಾಸಗಿ ಆಸ್ಪತ್ರೆಗಿಂತ ಉತ್ತಮ ಸೇವೆ ನೀಡುವುದು ಸಾಧ್ಯವಾಗಲಿದೆ. 

SCROLL FOR NEXT