ರಾಜ್ಯ

ಬೆಂಗಳೂರಿನಲ್ಲಿ 725 ಸೇರಿ ರಾಜ್ಯದಲ್ಲಿ ಇಂದು 1,509 ಮಂದಿಗೆ ಕೊರೋನಾ ಪಾಸಿಟಿವ್!

Vishwanath S

ಬೆಂಗಳೂರು: ರಾಜ್ಯದಲ್ಲಿ ಇಂದು 1,509 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿನ ಸಂಖ್ಯೆ 8,74,555ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 24 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,678 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ 8,38,150 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು 24,708 ಸಕ್ರೀಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಬೆಂಗಳೂರಿನಲ್ಲಿ ಇಂದು 725 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,64,390ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 4,078ಕ್ಕೆ ಏರಿಕೆಯಾಗಿದೆ.

SCROLL FOR NEXT