ಪ್ರಲ್ಹಾದ್ ಜೋಶಿ 
ರಾಜ್ಯ

1100 ಕೋಟಿ ರೂ. ವೆಚ್ಚದಲ್ಲಿ ಧಾರವಾಡ ಜಿಲ್ಲೆಗೆ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು: ಕೇಂದ್ರ ಸಚಿವ

ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಕುಸುಗಲ್ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಹರ್ ಘರ್ ಜಲ್ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24x7 ನೀರು ಲಭ್ಯವಾಗುವಂತೆ ಮಾಡಲಾಗುವುದು. ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ‌ ಹಾಗೂ ಕಸ ಸಂಗ್ರಹಿಸಲು ಗ್ರಾಮ ಪಂಚಾಯತಿಯಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಕುಸುಗಲ್ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಕುಸುಗಲ್ ಗ್ರಾಮಸ್ಥರು ನೀಡಿದ ಮನವಿ ಸ್ಪಂದಿಸಿದ ಕೇಂದ್ರ ಸಚಿವರು ಹುಬ್ಬಳ್ಳಿ ಬೈಪಾಸ್ ರಸ್ತೆಯಿಂದ ಕುಸುಗಲ್ ಗ್ರಾಮಕ್ಕೆ ಸರ್ವೀಸ್ ರೋಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ‌ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿ.ಪಂ.ಸಿಇಓ ಬಿ.ಸುಶೀಲಾ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT