ಸುರೇಶ್ ಕುಮಾರ್ 
ರಾಜ್ಯ

ಈ ವರ್ಷ ಶೈಕ್ಷಣಿಕ ಶೂನ್ಯ ಕಲಿಕಾ ವರ್ಷವೆಂದು ಘೋಷಣೆಯಾಗಿಲ್ಲ: ಸುರೇಶ್ ಕುಮಾರ್

ಕಲಿಕಾ‌‌ರಹಿತ(Zero academic year) ವರ್ಷದ ಪ್ರಸ್ತಾವನೆ‌ ಸರ್ಕಾರದ‌ ಮುಂದೆ‌ ಸದ್ಯಕ್ಕಿಲ್ಲ ಎಂದು ಶಿಕ್ಷಣ‌ ಸಚಿವ‌‌ ಸುರೇಶ್‌ ಕುಮಾರ್‌ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಶೈಕ್ಷಣಿಕ ಶೂನ್ಯ ಕಲಿಕಾ(Zero academic year) ವರ್ಷದ ಪ್ರಸ್ತಾವನೆ‌ ಸರ್ಕಾರದ‌ ಮುಂದೆ‌ ಸದ್ಯಕ್ಕಿಲ್ಲ ಎಂದು ಶಿಕ್ಷಣ‌ ಸಚಿವ‌‌ ಸುರೇಶ್‌ ಕುಮಾರ್‌ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಯಾವುದೇ ತರಗತಿಯ ಮಕ್ಕಳೂ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ‌ ಇಲಾಖೆಯು‌ ಪರ್ಯಾಯ ಬೋಧನಾ‌ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ‌ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ‌ ಏಳನೇ‌ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ‌ ಎಂದು ಸಚಿವರು ಹೇಳಿದ್ದಾರೆ.

ಎಲ್ಲ‌ ತರಗತಿಗಳ ಮಕ್ಕಳಿಗೆ ಪಠ್ಯ ಪುಸ್ತಕಗಳು ಪೂರೈಕೆಯಾಗಿವೆ. ಶಾಲೆಗಳಲ್ಲಿ ಶಿಕ್ಷಕರು ಹಾಜರಾಗುವ ಮೂಲಕ ವಿದ್ಯಾರ್ಥಿಗಳ‌‌ ಕಲಿಕೆಯನ್ನು ಪರಾಮರ್ಶಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಖಚಿತ ಜವಾಬ್ದಾರಿಯನ್ನು ನಿರ್ವಹಿಸಿ, ಎಲ್ಲ ತರಗತಿಗಳ ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಲಿದ್ದಾರೆ ಎಂದಿದ್ದಾರೆ.

ಖಾಸಗಿ ಶಾಲೆಗಳು ಅನುಸರಿಸುತ್ತಿರುವ ಪರ್ಯಾಯ ಕ್ರಮಗಳೂ ಸಹ ವಿದ್ಯಾರ್ಥಿಗಳ‌ ಕಲಿಕೆಯನ್ನು ಪ್ರೇರೇಪಿಸುವಂತಹವುಗಳೇ ಆಗಿದೆ. ಯಾವ ವಿದ್ಯಾರ್ಥಿಯೂ ಕಲಿಕೆಯ ಅವಕಾಶದಿಂದ ವಂಚನೆಯಾಗದ ಕಾರಣ ಈ ವರ್ಷವನ್ನು ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಎನ್ನಲು‌‌ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಶೈಕ್ಷಣಿಕ ಶೂನ್ಯ ಕಲಿಕಾ ವರ್ಷ ಅಥವಾ zero_academic_year ಎಂಬ ಪದ ಇತ್ತೀಚೆಗೆ ಹುಟ್ಟಿದೆ ಮತ್ತು ಈ ಕುರಿತು ಅನಗತ್ಯ ಗೊಂದಲ ಉಂಟಾಗುತ್ತಿದೆ. ಆದರೆ ಆ ರೀತಿಯ ಕಲಿಕಾ ರಹಿತ ವರ್ಷ ಎಂಬ ಕಲ್ಪನೆ ಸಹ ಶಿಕ್ಷಣ ಇಲಾಖೆಗೆ ಇಲ್ಲ. ನಾನು ಇಂದು ಈ ಕುರಿತು ಬಹಳ ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!