ರಾಜ್ಯ

ಕೋವಿಡ್-19 ಗೆ ಬೆಂಗಳೂರು ಪೇದೆ ಸಾವು

Nagaraja AB

ಬೆಂಗಳೂರು: ಕೋವಿಡ್-19 ಗೆ ನಗರದ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ರೇವಣ್ಣ ಮೃತ ಪೊಲೀಸ್ ಪೇದೆ. ಈ ಕುರಿತು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಕುಮಾರ್ ಪಾಟೀಲ್ ಅವರು ಟ್ವೀಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
 
ಕಾಮಾಕ್ಷಿಪಾಳ್ಯದ ಪೊಲೀಸ್ ಪೇದೆ ರೇವಣ್ಣ,(56) ಅವರು ಕೋವಿಡ್-19 ನಿಂದ ದೈವಾಧೀನರಾಗಿದ್ದು ತೀವ್ರ ದುಃಖವನ್ನುಂಟು ಮಾಡಿದೆ. ದೇವರು ಇವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ.ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
 
ರೇವಣ್ಣನವರು ಪೊಲೀಸ್ ಇಲಾಖೆ ಸೇರುವ ಮೊದಲು ಭಾರತೀಯ ಸೇನೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

SCROLL FOR NEXT