ಮುಖ್ಯಮಂತ್ರಿ ಯಡಿಯೂರಪ್ಪ 
ರಾಜ್ಯ

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂ ರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ದಿ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಸುಧೀರ್ಘವಾಗಿ ಚೆರ್ಚೆ ನಡೆಸಲಾಗಿದೆ.

ಚಳಿಗಾಲದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮಿತಿ ವರದಿ ನೀಡಿದೆ. ಅಲ್ಲದೆ, ನವೆಂಬರ್ ಅಂತ್ಯ ಹಾಗೂ ಡಿಸೆಂಬರ್ ತಿಂಗಳಲ್ಲಿ ಕೋವಿಡ್ 19 ಎರಡನೆ ಅಲೆ ಕಂಡುಬರುb  ಸಾಧ್ಯತೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿ ಸದೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಡಿಸೆಂಬರ್ ಮೂರನೆ ವಾರ ಮತ್ತೊಮ್ಮೆ ಸಭೆ ಸೇರಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆಗಳ ಅಭಿಪ್ರಾಯಗಳನ್ನು ಪಡೆದು ಶಾಲೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಈಗಾಗಲೇ ಅಂತಿಮ ವರ್ಷದ ಪದವಿ ಕಾಲೇಜುಗಳು ಆರಂಭವಾಗಿವೆ. ಶಾಲೆಗಳನ್ನು ಆರಂಭಿಸುವ ಚಿಂತನೆಯಿದೆ. ಆದರೆ ಶಾಲೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕೇಳಿ ಬರುವ ಸಲಹೆ - ಸೂಚನೆ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. 

ಸದ್ಯಕ್ಕೆ ಶಾಲೆ ಆರಂಭ ಬೇಡ: ಸಚಿವ ಡಾ. ಕೆ.ಸುಧಾಕರ್ ಸಲಹೆ
ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ,ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭ ಬೇಡ ಎಂದು ತೀರ್ಮಾನಿ ಸಲಾಯಿತು. ಈ ಸಭೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಡಿಸೆಂಬರ್ ನ ಚಳಿಗಾಲ ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು.ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ.ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವುದು ಬೇಡ ಎಂದು ಸಚಿವರು ಸಲಹೆ ನೀಡಿದರು.

ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 3ನೇ ವಾರದಲ್ಲಿ ಸಭೆ ನಡೆಸಿ,ಅವಲೋಕನ ಮಾಡಿ ನಿರ್ಧಾ ರ ತೆಗೆದುಕೊಳ್ಳಬಹುದು. ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಸಭೆಗೆ ತಿಳಿಸಿದರು.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಹಿರಿ ಯ ಅಧಿಕಾರಿಗಳು ಸಭೆಯಲ್ಲಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT