ಸಂಗ್ರಹ ಚಿತ್ರ 
ರಾಜ್ಯ

ನಿವಾರ್ ಚಂಡಮಾರುತ: ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿಗೂ ಮಳೆ ಅಪಾಯ

ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ 'ನಿವಾರ್' ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಚೆನ್ನೈ: ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ 'ನಿವಾರ್' ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಪರಿಣಾಮ ಉಂಟಾಗಿರುವ ನಿವಾರ್ ಚಂಡಮಾರುತದ ಪರಿಣಾಮ ನವೆಂಬರ್‌ 25 ಮತ್ತು 26 ರಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ,  ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ದಿನ ಈ ಭಾಗಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ ಎಂದು  ಹವಾಮಾನ  ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

ನವೆಂಬರ್ 25ರಂದು ಬೆಂಗಳೂರಿನಲ್ಲಿ ತೀವ್ರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ರಾತ್ರಿ ಕೂಡ ಮಳೆ ಸುರಿಯಬಹುದು. ಇನ್ನು ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಕೂಡ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯ ಸಾಧ್ಯತೆ ಇದೆ. ದಕ್ಷಿಣ  ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!