ಸಾಂದರ್ಭಿಕ ಚಿತ್ರ 
ರಾಜ್ಯ

ಕ್ರೂಸರ್-ಕಾರು ಡಿಕ್ಕಿ: ನಾಲ್ವರ ದಾರುಣ ಸಾವು

ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ.

ಧಾರವಾಡ: ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ.

ಮೃತರನ್ನು ಮಾನ್ವಿಯ ವಿಠ್ಠಲ ನಗರದ ಸಣ್ಣಗಂಗಣ್ಣ, ನಾಗಮ್ಮ, ಈರಣ್ಣ, ಹಣಮಂತ ಎಂದು ಗುರುತಿಸಲಾಗಿದ್ದು, ಮೃತರೆಲ್ಲರು ಕಾರಿನಲ್ಲಿದ್ದವರು ಎನ್ನಲಾಗಿದೆ. ಕಾರಿನಲ್ಲಿ ಮಾನ್ವಿಯಿಂದ ಕಾರವಾರದ ಹಲಗದ ಆಸ್ಪತ್ರೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕ್ರೂಸರ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಘಟನೆಯಲ್ಲಿ ಸಣ್ಣೀರಣ್ಣ, ಲಕ್ಷ್ಮೀ ಹಾಗೂ ಕ್ರೂಸರ್ ಚಾಲಕ ಮಲ್ಲಪ್ಪ ಅವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಅಣ್ಣೀಗೇರಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಣ್ಣಿಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!