ಸಂಗ್ರಹ ಚಿತ್ರ 
ರಾಜ್ಯ

ಮುಂಬರುವ ಚಳಿಗಾಲ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ: ಸಚಿವ ಪ್ರಭು ಚೌವ್ಹಾಣ್

ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ...

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಸಂಬಂಧ ಬರುವ ಡಿ.7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ. 

ರಾಜ್ಯಸ್ಥಾನ, ಆಂಧ್ರಪ್ರದೇಶ, ತೆಲಂಗಾಣ, ಅಸ್ಸಾಂ, ಬಿಹಾರ ಸೇರಿದಂತೆ ಹಲವು ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಬೇರೆ ಬೇರೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಮತ್ತು ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದೆ. ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಹಾಗೂ ಅಕ್ರಮ ಜಾನುವಾರ ಸಾಗಾಟ ಸಂಪೂರ್ಣ ನಿಷೇಧವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ. 

ಹಿಂದೆ 2010ರಲ್ಲಿ ರಾಜ್ಯದಲ್ಲಿ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ 1964 ಬದಲಾಗಿ, ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2010 ಅನ್ನು ಅಂದಿನ ಬಿಜೆಪಿ ಸರ್ಕಾರದ ಅವಧಿ ವೇಳೆ ವಿಧಾನಮಂಡಲದಲ್ಲಿ ಮಂಡಿಸಿದ ನಂತರ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಆಗಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿದ್ದರಿಂದ ಕಾಯ್ದೆಯ ಅನುಷ್ಠಾನದಲ್ಲಿ ವಿಳಂಬವಾಯಿತು. ಅಲ್ಲದೇ, ಕೇಂದ್ರ ಗೃಹ ಇಲಾಖೆ ಸಹ ಕೆಲವು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು ಎಂದು ಅವರು ತಿಳಿಸಿದ್ದಾರೆ. 

ಕಾಂಗ್ರೆಸ್ ಸರ್ಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಯ್ನನು ಮುಂದುವರೆಸಿತು. ಈಗ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಅನುಷ್ಠಾನಗೊಳಿಸಲಾಗುವುದು. ಕಾಯ್ದೆ ಜಾರಿಗೆ ಬಂದರೆ ಜಾನುವಾರುಗಳ ವಧೆಗೆ ನಿಷೇಧ, ಗೋಮಾಂಸ ಮಾರಾಟ ಮತ್ತು ಬಳಕೆಗೆ ನಿಷೇಧ, ವಧೆಗಾಗಿ ರಾಜ್ಯದಲ್ಲಿ ಮತ್ತು ಹೊರ ರಾಜ್ಯಗಳಿಗೆ ಜಾನುವಾರುಗಳ ಅಕ್ರಮಕ್ಕೆ ಕಡಿವಾಣ ಬೀಳಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ