ರಾಜ್ಯ

ಬೆಂಗಳೂರು: ಕುಖ್ಯಾತ ವಾಹನಗಳ್ಳನ ಬಂಧನ, 5 ದ್ವಿಚಕ್ರ ವಾಹನ ವಶ

Raghavendra Adiga

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ವಿಜಯ್‍ಕುಮಾರ್ ಅಯ್ಯರ್ ಎನ್.ಎಸ್ (35 ) ಎಂಬ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ 2 ಲಕ್ಷ ರೂ. ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ತಿಂಗಳ 19ನೇ ದಿನಾಂಕದಂದು ನಗರದಲ್ಲಿ ನಡೆದ  ಸರಣಿ ವಾಹನ ಕಳ್ಳತನ ಪ್ರಕರಣದ ಹಿನ್ನೆಲೆ ಪೋಲೀಸರು ಕಾರ್ಯಾಚರಣೆ ನಡೆಸಿದ್ದಾಗ ಕಳ್ಳನ ಪತ್ತೆಯಾಗಿದೆ. ನವೆಂಬರ್ 24ರಂದು ಹರಿಶ್ಚಂದ್ರ ಘಾಟ್ ಸಮೀಪ ಅನುಮಾನಾಸ್ಪದವಾಗಿ ವಾಹನ ಚಲಾವಣೆ ಮಾಡುತ್ತಿದ್ದ ಆರೋಪಿ ವಿಜಯ್‍ಕುಮಾರ್ ನನ್ನು ಪ್ರಶ್ನಿಸಿದಾಗ ಕೃತ್ಯ ಬೆಳಕು ಕಂಡಿದೆ.

ಆರೋಪಿಯು ಕದ್ದ ವಾಹನವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದನೆಂದು ಪೋಲೀಸರು ಹೇಳಿದ್ದಾರೆ. 

ಅನಿಲ್‍ಕುಮಾರ್.ಪಿ ಎಂಬುವವರು ನ. 19 ರಂದು ಗಾಯತ್ರಿ ನಗರದ 9ನೇ ಕ್ರಾಸ್‍ನಲ್ಲಿರುವ ತಮ್ಮ ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಯಾರೋ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ವಾಹನ ಕಳವು ಪ್ರಕರಣ ದಾಖಲಾಸಿದ್ದರು.

ನ.24 ರಂದು ಸಂಜೆ ಸುಮಾರು 5.30 ಗಂಟೆ ಸಮಯದಲ್ಲಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಕ್ರೈಂ ಸಿಬ್ಬಂದಿ ಗಸ್ತಿನಲ್ಲಿದ್ದಾಗ ತಮ್ಮ ಠಾಣಾ ವ್ಯಾಪ್ತಿಯಲ್ಲಿರುವ ಹರಿಶ್ಚಂದ್ರ ಘಾಟ್ ಬಸ್ಸು ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯ ವಾಹನದ ದಾಖಲಾತಿಗಳನ್ನು ನೀಡಲು ಕೇಳಿದಾಗ, ಆರೋಪಿಯ ಬಳಿ ಯಾವುದೇ ದಾಖಲಾತಿಗಳು ಇಲ್ಲರಲಿಲ್ಲ. ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆತ‌ ವಾಹನ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಬಂಧನದಿಂದ ಸುಬ್ರಹ್ಮಣ್ಯನಗರ - 1, ಕೋಣನಕುಂಟೆ - 1, ಒಟ್ಟು 5 ದ್ವಿಚಕ್ರ ವಾಹನಗಳಲ್ಲಿ 2, ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 3 ದ್ವಿಚಕ್ರ ವಾಹನಗಳ ವಾರಸುದಾರರ ಪತ್ತೆ ಮಾಡಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಬ್ರಹ್ಮಣ್ಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಸಂಜೀವ್ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

SCROLL FOR NEXT