ರಾಜ್ಯ

ನರೇಗಾ ಯೋಜನೆಯಡಿ ಕೇಂದ್ರದಿಂದ ಕರ್ನಾಟಕಕ್ಕೆ 900 ಕೋಟಿ ರೂ. ಹೆಚ್ಚುವರಿ ಅನುದಾನ

Sumana Upadhyaya

ಬೆಂಗಳೂರು: ನರೇಗಾ ಯೋಜನೆಯಡಿ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಹೆಚ್ಚುವರಿ 900 ಕೋಟಿ ರೂಪಾಯಿ ನೀಡಲು ಮುಂದಾಗಿದೆ.

ಈ ವಿಷಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಮೊನ್ನೆ ಮಂಗಳವಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಅವರನ್ನು ಭೇಟಿ ಮಾಡಿದ್ದ ಸಚಿವ ಕೆ ಎಸ್ ಈಶ್ವರಪ್ಪ, ನರೇಗಾ ಯೋಜನೆಯಡಿ ಕರ್ನಾಟಕದ 173 ನೆರೆ ಪೀಡಿತ ತಾಲ್ಲೂಕುಗಳ ಕಾರ್ಮಿಕರ ಪ್ರತಿ ಕುಟುಂಬದಲ್ಲಿ ಉದ್ಯೋಗವನ್ನು 100 ದಿನಗಳಿಂದ 150 ದಿನಗಳಿಗೆ ಹೆಚ್ಚಳ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪರಿಶೀಲಿಸುವುದಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು ಭರವಸೆ ನೀಡಿದ್ದು, ರಾಜ್ಯಕ್ಕೆ ಹೆಚ್ಚುವರಿ 400 ಕೋಟಿ ರೂಪಾಯಿ ನರೇಗಾ ಯೋಜನೆಯಡಿ ಸಿಗಲಿದೆ ಎಂದು ಸಚಿವರು ತಿಳಿಸಿದರು.

ನರೇಗಾ ಯೋಜನೆಯಡಿ ಕಾರ್ಮಿಕರಿಗೆ ವೇತನ ನೀಡಲು 1,119 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರ ಮನವಿ ಮಾಡಿಕೊಂಡಿತ್ತು. 

SCROLL FOR NEXT