ಬಿಸಿ ಪಾಟೀಲ್ 
ರಾಜ್ಯ

ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಬಿ.ಸಿ. ಪಾಟೀಲ್

ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ 54ನೇ ಘಟಿಕೋತ್ವವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ. ಪಡೆದವರಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿನ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕು ಎಂದು ಸಲಹೆ ಮಾಡಿದರು.

ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ ಎಂದರು.

ಇನ್ನು ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇಕಡ 15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ಬಿಸಿ ಪಾಟೀಲ್ ಅವರು ವಿವರಿಸಿದರು.

ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ  ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ  ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT